25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಗಂಡಿಬಾಗಿಲು: ಇಲ್ಲಿಯ ಸಿಯೋನ್ ಆಶ್ರಮದಲ್ಲಿ ಜೂ.ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಜುನೈಡ್ ದಂತವೈದ್ಯರು, ಡಾ.ರಯಾನ್, ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

200ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಯೆನೆಪೋಯ ಸಂಸ್ಥೆಯ ಸಮಾಜ ಸೇವಕರಾದ ಭರತ್ ಮತ್ತು ದಿವ್ಯರವರು, ಸಂಸ್ಥೆಯ ವೈದ್ಯರಾದ ಡಾ.ಶಿವಾನಂದಸ್ವಾಮಿಯವರು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!