23.3 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಹಾಗೂ ನುರಿತ ಕೃಷಿಕರು ಪ್ರಭಾಕರ್ ಮಯ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕರಾದ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಶ್ರೀಯುತ ಸಯ್ಯದ್ ಮಹಮ್ಮದ್ ಅಯ್ಯುಬ್ , ಕೋಶಾಧಿಕಾರಿ ಶ್ರೀಯುತ ಸಯ್ಯದ್ ಮಹಮ್ಮದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.ಶಾಲಾ ಶಿಕ್ಷಕರ ಯೋಗ ಪ್ರದರ್ಶನದ ಮೂಲಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ರವರು ಕಾರ್ಯಕ್ರಮಕ್ಕೆ ವಿಶಿಷ್ಟ ವಾಗಿ ಚಾಲನೆಯನ್ನು ನೀಡಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಶ್ರೀಯುತ ಪ್ರಭಾಕರ ಮಯ್ಯರವರು “ಯೋಗ ಮಾಡಿ ರೋಗ ದೂರ ಮಾಡಿ, ಯೋಗದಿಂದ ಮನಸ್ಸಿಗೆ ಶಾಂತಿ ದೇಹಕ್ಕೆ ಶಕ್ತಿ ಸಿಗುತ್ತದೆ ” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.9 ನೇ ತರಗತಿಯ ವಿದ್ಯಾರ್ಥಿನಿ ಪಾತಿಮತ್ ಪಾಯಿಝ ಕಾರ್ಯಕ್ರಮವನ್ನು ನಿರೂಪಿಸಿ, ಮುಹಮ್ಮದ್ ಸುಹೖಬ್ ಅತಿಥಿ ಗಳಿಗೆ ಸ್ವಾಗತ ಕೋರಿದರು, ಜಲಾಲುದ್ದಿನ್ ಮುನಾವ್ವರ್ ವಂದನಾರ್ಪಣೆ ಸಮರ್ಪಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಡಿ.29: ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ವೈಭವ

Suddi Udaya
error: Content is protected !!