23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಕಲ್ಪತರು ನರ್ಸಿಂಗ್ ಸ್ಕೂಲ್ ಜೂ.23 ರಂದು ಶ್ರದ್ಧೆಯೊಂದಿಗೆ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ಮಾತನಾಡಿ “ನೀವು ಇಂದು ಈ ದೀಪವನ್ನು ಹೊತ್ತಿರುವಷ್ಟೆ ಅಲ್ಲ, ರೋಗಿಗಳಿಗಾಗಿ ಪ್ರೀತಿಯ ದೀಪವನ್ನೂ ಬೆಳಗಿಸಲು ಕರೆಹೊಂದಿದವರು. ಈ ಸೇವೆಗೆ ಸಮರ್ಪಿತ ಮನಸ್ಸು ಅತ್ಯಗತ್ಯ. ಈ ದೀಪ ನಿಮ್ಮ ಜೀವನದ ದಿಕ್ಕನ್ನು ತೋರಿಸುವ ಬೆಳಕು ಆಗಲಿ” ಎಂದು ಆಶೀರ್ವದಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ , ಇತರ ಗಣ್ಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯರು ವಿದ್ಯೆಯ ದೀಪ ಬೆಳಗಿಸಿ ನರ್ಸಿಂಗ್ ಸೇವೆಗೆ ತಮ್ಮ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ವಿದ್ಯಾರ್ಥಿಗಳಿಗೆ ಪೋಷಕರು, ಬಂಧುಮಿತ್ರರು ಹಾಗೂ ಶಿಕ್ಷಕರು ಹಾರೈಕೆ ಸಲ್ಲಿಸಿದರು. ಕಲ್ಪತರು ನರ್ಸಿಂಗ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಚಂದ್ರಿಕಾರವರು ಪ್ರತಿಜ್ಞೆಯನ್ನು ಹೇಳಿಕೊಟ್ಟರು.

Related posts

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya
error: Content is protected !!