ಕಳೆಂಜ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಬಿಜೆಪಿ ಘಟಕದಿಂದ ಕಳೆಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ., ಶಕ್ತಿ ಕೇಂದ್ರ ಧನಂಜಯ ಗೌಡ, ಪ್ರಭಾರಿ ಪ್ರೀತಂ ಧರ್ಮಸ್ಥಳ,
ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್, ಪಂಚಾಯತ್ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಗೌಡ, ಸದಸ್ಯರು, ಬಿಜೆಪಿ ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕರ್ತರು ,ಉಪಸ್ಥಿತರಿದ್ದರು.











