25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಲಾಯಿಲ ಗ್ರಾ.ಪಂ. ಎದುರು ಪ್ರತಿಭಟನೆ

ಲಾಯಿಲ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಇಂದು ಲಾಯಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಮುಖ್ಯ ಭಾಷಣಕಾರರಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಧಾಕರ ಬಿ.ಎಲ್ ಇವರು ಮಾತನಾಡಿ ರಾಜ್ಯ ಸರ್ಕಾರದ ವೈಫಲ್ಯವನ್ನು ಸಾರ್ವಜನಿಕರ ಮುಂದೆ ಬಿಚ್ಚಿಟ್ಟರು. ಪ್ರಾಸ್ತಾವಿಕವಾಗಿ ಮಾತನಾಡಿದ ಮಂಡಲ ಕಾರ್ಯದರ್ಶಿ ಗಿರೀಶ್ ಗಿರೀಶ್ ಡೋಂಗ್ರೆ ಇವರು ಕಟ್ಟಡ ಕಾರ್ಮಿಕರ ಅನುಭವಿಸುತ್ತಿರುವ ಸಮಸ್ಯೆಯನ್ನು ವಿವರಿಸಿದರು. ಯುವ ಮೋರ್ಚಾ ಮಂಡಲ ಉಪಾಧ್ಯಕ್ಷ ಗಣೇಶ್. ಆರ್ ಸ್ವಾಗತಿಸಿ ಬೂತ್ 66 ರ ಕಾರ್ಯದರ್ಶಿ ಜಗದೀಶ್ ಕನ್ನಾಜೆ ಧನ್ಯವಾದಗೈದರು.

ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಮಾರ್ ಇವರು ಕಾರ್ಯಕ್ರಮವನ್ನು ನಿರೂಪಿಸಿ ಪಕ್ಷದ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರವನ್ನು ಓದಿದರು.

ಈ ಸಂದರ್ಭದಲ್ಲಿ ಲಾಯಿಲ ಶಕ್ತಿ ಕೇಂದ್ರ ಅಧ್ಯಕ್ಷರಾದ ಗಣೇಶ್ ಸಫಲ್ಯ, ತಾಲೂಕು ಸಹಕಾರ ಭಾರತಿ ಅಧ್ಯಕ್ಷ ವೆಂಕಪ್ಪಯ್ಯ ಭಟ್, ಮಂಡಲ ಕಾರ್ಯದರ್ಶಿ ಆಶಾ ಸಾಲ್ಡನ, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮಾಂಜಲ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರುಕ್ಮಯ ಕನ್ನಾಜೆ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಬೂತ್ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿ, ಸಿ.ಎ ಬ್ಯಾಂಕ್ ನಿರ್ದೇಶಕರು, ಹಾಲಿನ ಸೊಸೈಟಿ ನಿರ್ದೇಶಕರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Related posts

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya
error: Content is protected !!