September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

ಶಿಶಿಲ : ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿಶಿಲ ಈಗಾಗಲೇ ಸುಮಾರು 70 ವರ್ಷಗಳನ್ನು ಪೂರೈಸಿದ ಈ ಶಾಲಾ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ನೂತನ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದ್ದು, ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ನೆರವಾಗುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡ ಉಜಿರೆಯವರು ಜೂ. 23ರಂದು ಶಾಲೆಗೆ ಆಗಮಿಸಿ ವಿದ್ಯಾಭಿಮಾನಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಸಭೆಯ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮೋಹನ್ ಗೌಡ ವಹಿಸಿದ್ದರು. ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್ , ಸದಸ್ಯ ಅಬೂಬಕ್ಕರ್, ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್, ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಶಿಲ ಗ್ರಾ.ಪಂ ಅಧ್ಯಕ್ಷ ಸುದೀನ್ ಡಿ., ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಸ್ವಾಗತಿಸಿದರು. ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರತ್ನ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಆಶಾ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳ ಪೋಷಕರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಕಟ್ಟಡ ಸಮಿತಿ ಪದಾಧಿಕಾರಿಗಳು, ಗ್ರಾಪಂ ಸದಸ್ಯರು, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!