ಉಜಿರೆ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಬಿಜೆಪಿ ಘಟಕದಿಂದ ಉಜಿರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.
ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಕೇಶವ ಭಟ್ ಅತ್ತಾಜೆ, ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಹಾಗೂ ಪಕ್ಷದ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.











