September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಉಜಿರೆ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಬಿಜೆಪಿ ಘಟಕದಿಂದ ಉಜಿರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ವಿಧಾನ ಪರಿಷತ್ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಕೇಶವ ಭಟ್ ಅತ್ತಾಜೆ, ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಹಾಗೂ ಪಕ್ಷದ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya
error: Content is protected !!