September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಇವರ ನೇತೃತ್ವದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಎದುರು ಜೂ.23 ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಯಾನಂದ ಗೌಡ ಪ್ರಜ್ವಲ್ ಅವರು ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ರಾಜ್ಯದಲ್ಲಿ ಭೂಮಾಫಿಯ, ಪಟ್ಟಭದ್ರ ಹಿತಾಸಕ್ತಿಗಳಿಂದ ಜನರಿಗೆ ಸುಲಭ ರೀತಿಯ ಸೇವೆ ದೊರಕದೆ ಭ್ರಷ್ಟಚಾರದ ಕೂಪದಿಂದ ಶ್ರೀಸಾಮಾನ್ಯನ ಹಣ ದೋಚಲು ಅವೈಜ್ಞಾನಿಕ ನಿಯಮ ರೂಪಿಸಿ ಅಲೆದಾಟದ ಭಾಗ್ಯ ಒದಗಿಸಿರುವುದನ್ನು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.


ಪಟ್ಟಣವಾಸಿಗಳಿಗೆ ನೀಡುತ್ತಿದ್ದ ಪಂಚಾಯತ್ ಸೇವೆಗಳನ್ನು ಕಠಿಣಗೊಳಿಸಿದ ಪರಿಣಾಮ ಇಂದು ಜನಸಾಮಾನ್ಯರು ನಿವೇಶನಕ್ಕೆ ಬಿಖಾತೆ ಕೊಟ್ಟರೂ, ಸಮಸ್ಯೆ ಉಂಟಾಗಿ ಅನುಮತಿ ಸಿಗದೆ ಮನೆ ನಿರ್ಮಾಣಕ್ಕೆ ಗೃಹ ಮಂಡಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಅದೇ ರೀತಿ ಕಟ್ಟಡಕ್ಕೆ ಸೂಕ್ತ ಪರವಾನಿಗೆ ನೀಡದೆ ಅವೈಜ್ಞಾನಿಕ ಕಾರಣ ನೀಡುವುದರಿಂದ ಮನೆ ನಿರ್ಮಾಣಕ್ಕೆ ಮನೆ ನಂಬ್ರ ನೀಡದಿರುವುದು, ವಿದ್ಯುತ್ ಸಂಪರ್ಕ ನಿರಾಕರಿಸುವುದು ಜನತೆಯ ದೈನಂದಿನ ಜೀವನಕ್ಕೆ ಬಹಳಷ್ಟು ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಂಗದ ಮುಖ್ಯಸ್ಥರಾದ ರಾಜ್ಯಪಾಲರು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಿ ಜನಪರ ಸೇವೆ ಸುಲಲಿತವಾಗಿ ದೊರೆಯುವಂತಾಗಲು ಕಾರಣೀಕರ್ತರಾಗಬೇಕೆಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಘಟಕದ ಪರವಾಗಿ ಒಕ್ಕೊರಲಿನಿಂದ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು. ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಮುಖ್ಯಾಧಿಕಾರಿ ರಾಜೇಶ್ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಹಾಗೂ ನ್ಯಾಯವಾದಿ ಅನಿಲ್ ಕುಮಾರ್, ಪ.ಪಂ ಸದಸ್ಯರಾದ ರಜನಿ ಕುಡ್ವ, ಲೋಕೇಶ್ ನಾಯ್ಕ, ಶಕ್ತಿಕೇಂದ್ರದ ಪ್ರಮುಖ್ ಪ್ರಕಾಶ್ ಆಚಾರ್ಯ, ಪ.ಪಂ ಮಾಜಿ ಅಧ್ಯಕ್ಷೆ ವೀಣಾ ವಿ. ಕುಮಾರ್, ಬೂತ್ ಅಧ್ಯಕ್ಷ ಪ್ರೇಮನಾಥ್ ಶೆಟ್ಟಿ, ಪ್ರಮುಖರಾದ ಭುಜಂಗ ಶೆಟ್ಟಿ, ಹರೀಶ್ ಕೆಲ್ಲಗುತ್ತು, ರಾಜೇಶ್ ಕೆಲ್ಲಗುತ್ತು, ಶಿವಶಂಕರ್, ಶ್ರೀಮತಿ ಲಲಿತಾ, ಶಂಕರ್, ಆಶಾ ಸತೀಶ್, ಉಷಾ, ರವಿ, ರಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು. ಶಕ್ತಿಕೇಂದ್ರದ ಪ್ರಮುಖ್ ಕೇಶವ ಅಚ್ಚಿನಡ್ಕ ಸ್ವಾಗತಿಸಿ, ಮನವಿ ವಾಚಿಸಿದರು.

Related posts

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
error: Content is protected !!