September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

ಆರಂಬೋಡಿ : ಆರಂಬೋಡಿ ಹಿಂದೂ ಜಾಗರಣ ವೇದಿಕೆ ಎಲಿಯನಡುಗೋಡು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾಂಗಣ ಹೊಕ್ಕಾಡಿಗೋಳಿ ಕೂಡುರಸ್ತೆಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಪ್ರಣೀತ್ ಹಿಂಗಾಣಿ ವಹಿಸಿದರು.ಈ ವರ್ಷ 40ನೇ ವರ್ಷದ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಕಾರ್ಯಕ್ರಮ ಗಳೊಂದಿಗೆ ಜರಗಲಿದೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಪ್ರತಿ ವರ್ಷದಂತೆ ಶ್ರೀ ಕೃಷ್ಣ ದೇವರ ಪೂಜೆಯೊಂದಿಗೆ, ಧ್ವಜಾರೋಹಣ, ನಂತರ ರಕ್ಷಾ ಬಂಧನ, ಬೌದಿಕ್, ವಿವಿಧ ಮಂಡಳಿ ಗಳಿಂದ ಭಜನೆ, ಮದ್ಯಾಹ್ನ ಅನ್ನ ಸಂತರ್ಪಣೆ, ವಿವಿಧ ಆಟೋಟ ಸ್ಪರ್ಧೆ ಗಳು,ಅಲ್ಲದೆ ವಿವಿಧ ವಿನೋದವಲಿಗಳೊಂದಿಗೆ ಮೆರವಣಿಗೆ, ನಂತರ ಸುಪ್ರಸಿದ್ದ ಕಲಾವಿದರಿಂದ ನಾಟಕ ಜರಗಲಿದೆ.ಹಾಗೂ ಕಳೆದ 40 ವರ್ಷಗಳಿಂದ ಸಂಘಟನೆಯಲ್ಲಿ ದುಡಿದ ಸಂಘಟಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಸುದೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ಗೌರವಧ್ಯಕ್ಷರು, ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳು, ಆರಂಬೋಡಿ ಗ್ರಾಮ ಪಂಚಾಯತ್ ಸದಸ್ಯರುಗಳು, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು, ವಿವಿಧ ಭಜನಾ ಮಂಡಳಿಯ ಪದಾಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!