September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಷನ್ ಕಾರ್ಯಕ್ರಮ ಜೂ. 23 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಮಾಡಿದ ಧರ್ಮಸ್ಥಳ ಸ್ಟಉದ್ಯೋಗ ತರಬೇತಿ ಸಂಸ್ಥೆ( ರುಡ್ ಸೆಟ್) ಯ ಹಿರಿಯ ಉಪನ್ಯಾಸಕ ಕರುಣಾಕರ್ ಜೈನ್ ಮಾತನಾಡುತ್ತ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಯಶಸ್ಸಿಗೆ ಸಹಾಯ ಮಾಡುವುದಲ್ಲದೆ, ಭವಿಷ್ಯದ ವೃತ್ತಿ ಜೀವನದ ಸವಾಲುಗಳಿಗೆ ಅವರನ್ನು ಸಿದ್ದಪಡಿಸುವ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಇಂದಿನ ಕ್ರಿಯಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿಯ ನಿರ್ಣಾಯಕ ಪ್ರಾಮುಖ್ಯತೆಯನ್ನು ಹೇಳಿದರು. ಪೋಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿ ವರ್ತಿಸಬೇಕು ಎಂದು ಒತ್ತಿಹೇಳಿದರು.


ಪ್ರಾಂಶುಪಾಲರಾದ ಸಂತೋಷ್ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಮತ್ತು ಡಿಪ್ಲೋಮಾ ಕೋರ್ಸ್ ಗಳ ಕುರಿತು ಮಾಹಿತಿ ನೀಡಿದರು. ಅದಲ್ಲದೆ, ಕಾಲೇಜಿನ ನಿಯಮಗಳು ಮತ್ತು ನಿಬಂಧನೆಗಳನ್ನು ವಿವರಿಸಿದರು.


ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕರಾದ ಶಂಕರ್ ಭಟ್ ಎಚ್.ಆರ್ ಸ್ವಾಗತಿಸಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ಉಪನ್ಯಾಸಕರಾದ ಶಿವಪ್ರಸಾದ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಉಪನ್ಯಾಸಕರಾದ ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ನಿಖಿತ್ ಡಿ. ಆರ್ ಧನ್ಯವಾದ ಸಮರ್ಪಿಸಿದರು.

Related posts

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!