September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

ನಾರಾವಿ : ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಶಕ್ತಿ ಕೇಂದ್ರ ನಾರಾವಿ ಮತ್ತು ಕುತ್ಲೂರು ವತಿಯಿಂದ ಅಭಿವೃದ್ಧಿ ಶೂನ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆಯನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಯುವ ವಾಗ್ಮಿ ಸುನಿಲ್ ಪಣಪಿಲರವರು ಭಾಗವಹಿಸಿ ತನ್ನ ದಿಕ್ಸೂಚಿ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿವರಿಸಿ ಜನ ವಿರೋಧಿ ನೀತಿಗಳನ್ನು ಖಂಡಿಸಿದರು. ನಂತರ ಜನ ಸಾಮಾನ್ಯರ ಜೀವನದ ಸ್ಥಿತಿ ಗತಿಗಳ ಮೇಲೆ ದುಷ್ಪರಿಣಾಮ ಬೀರುವ ಕಾಂಗ್ರೆಸ್ ಸರ್ಕಾರದ ಕಾರ್ಯ ಯೋಜನೆಗಳನ್ನು ಖಂಡಿಸಿ ಅಭಿವೃದ್ಧಿಪರ ಜನಪರ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲಕ ನಾರಾವಿ ಮತ್ತು ಕುತ್ಲೂರು ಶಕ್ತಿಕೇಂದ್ರ ಅಧ್ಯಕ್ಷರುಗಳು ಮನವಿಯನ್ನು ನೀಡಿದರು.

ಈ ಸಂದರ್ಭದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದಯಾನಂದ ಪೂಜಾರಿ, ಕುತ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಶ್ರೀಮತಿ ರಾಜಶ್ರೀ, ಬಿಜೆಪಿ ಮಹಾಶಕ್ತಿ ಕೇಂದ್ರ ನಾರಾವಿಯ ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಸದಸ್ಯೆ,ನಾರಾವಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಬಿಜೆಪಿ ಬೆಳ್ತಂಗಡಿ ಮಹಿಳಾ ಮೋರ್ಚಾ ಸದಸ್ಯೆ ಆಶಾಲತಾ, ನಾರಾವಿ ಮಹಾಶಕ್ತಿ ಕೇಂದ್ರ ತಂಡದ ಸದಸ್ಯರಾದ ವಸಂತ್ ಆಚಾರ್ಯ, ಕುತ್ಲೂರು ಶಕ್ತಿ ಕೇಂದ್ರ ಅಧ್ಯಕ್ಷರಾದ ರತ್ನಾಕರ ಬಡೆಕ್ಕಿಲ, ನಾರಾವಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಅಜಿತ್ ಕುತ್ಲೂರು ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರುಗಳು, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು, ಬೂತ್ ಸಮಿತಿಯ ಪದಾಧಿಕಾರಿಗಳು, ಪಕ್ಷದ ಪ್ರಮುಖ ನಾಯಕರುಗಳು, ಸಂಘ ಪರಿವಾರದ ನಾಯಕರುಗಳು, ಕಾರ್ಯಕರ್ತ ಬಂಧುಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya

ಉಜಿರೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
error: Content is protected !!