25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

ಮಿತ್ತಬಾಗಿಲು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಬಿಜೆಪಿ ಘಟಕದಿಂದ ಮಿತ್ತಬಾಗಿಲು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯಿಂದಾಗಿ ಇಂದು ರಸ್ತೆಗಳಿಗೆ ಚರಲು ಹಾಕಬೇಕಾದರೆ ಪಂಚಾಯತ್ ನಲ್ಲಿ ಅನುದಾನ ಇಲ್ಲದಾಗಿದೆ. ಕೇಂದ್ರ ಸರ್ಕಾರದ 15ನೇ ಹಣಕಾಸಿನಿಂದ ಮಾತ್ರ ಇಂದು ಸಣ್ಣ ಪುಟ್ಟ ಕೆಲಸಗಳು ನಡೆಯುತ್ತಿದೆ. ಕಾಂಗ್ರೆಸ್ ನ ಬಿಟ್ಟಿ ಭಾಗ್ಯದಿಂದಾಗಿ ಜನ ಸಾಮಾನ್ಯರಿಗೆ ಸಮಸ್ಯೆಗಳು ಆಗುತ್ತಿದೆ ಎಂದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಹಿರಿಯ ಮುಖಂಡ ವಾಸುದೇವ ರಾವ್ ಕಕ್ಕೇನೇಜಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Related posts

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!