ಕೊಯ್ಯೂರು : ಕೊಯ್ಯೂರು ದೇವಸ್ಥಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ಯೋಗ ಅಭ್ಯಾಸದ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನದ ವಿವಿಧ ಆಸನಗಳನ್ನು ಮಾಡಿ ತೋರಿಸಿ ಮಕ್ಕಳಿಂದ ಮಾಡಿಸಿದರು.
ಕಾರ್ಯಕ್ರಮದಲ್ಲಿ ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ ಮತ್ತು ಶಾಲಾ ಸಹಶಿಕ್ಷಕರು ಉಪಸ್ಥಿತರಿದ್ದರು.











