37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡು ಬಂದಿರುತ್ತದೆ.

ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ಧವಿರುವುದಾಗಿ ತಿಳಿಸಿರುತ್ತಾರೆ.

ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Related posts

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya
error: Content is protected !!