23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

ಗುರುವಾಯನಕೆರೆ: ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23ರಂದು ಕುವೆಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾ.ಪಂ ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿಯವರು ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ದುರಾಡಳಿತ ನೀತಿಯನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮದ ಶಕ್ತಿ ಕೇಂದ್ರಗಳ ಅಧ್ಯಕ್ಷರಾದ, ಚಂದ್ರಹಾಸ್ ದಾಸ್, ರಾಜಪ್ರಕಾಶ್ ಶೆಟ್ಟಿ ಪ್ರಭಾರಿ ಬಾಲಕೃಷ್ಣ ಬಿರ್ಮೋಟ್, ವಿಠಲ ಆಚಾರ್ಯ, ಉಮೇಶ್ ಕುಲಾಲ್, ವಸಂತ ಮಠ, ಗ್ರಾ.ಪಂ ಉಪಾಧ್ಯಕ್ಷರಾದ ಗಣೇಶ್ ಕೆ. ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಹಾಗೂ ಪ್ರಮುಖರು ಭಾಗವಹಿಸಿದರು. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ನೂರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ಘೋಷಣೆ ಕೂಗಿ ಪ್ರತಿಭಟಸಿದರು.

ರಾಜ್ಯಪಾಲರಿಗೆ ಮನವಿಯನ್ನು ಪಂಚಾಯತ್ ಕಾರ್ಯದರ್ಶಿಯವರ ಮುಖಾಂತರ ಸಲ್ಲಿಸಸಲಾಯಿತು.

Related posts

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!