September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ


ಅಳದಂಗಡಿ : ಇಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂ ಆರ್ ಪಿ ಎಲ್ ಸಂಸ್ಥೆಯ ರೂ 9 ಲಕ್ಷ ಸಿಎಸ್ಆರ್ ಅನುದಾನದಿಂದ ನೀಡಿದ ಸುಸಜ್ಜಿತ ಭೌತಶಾಸ್ತ್ರ ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಪ್ರಯೋಗಾಲಯ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಜೂ. 21 ರಂದು ನಡೆಯಿತು.

ಎಂಆರ್‌ಪಿಎಲ್ ಸಂಸ್ಥೆಯ ಇನ್ಫಾರ್ಮಶನ್ ಸೈನ್ಸ್ ವಿಭಾಗದ ಚೀಫ್ ಜನರಲ್ ಮ್ಯಾನೇಜರ್ ಅಳದಂಗಡಿ ಅರ್ವಗುತ್ತು ಶ್ರೀ ಶರತ್ ಬುಡಾಲೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ, ಉದ್ಘಾಟಿಸಿ, ವಿದ್ಯಾರ್ಥಿಗಳು ಸತತ ಪರಿಶ್ರಮ ಏಕಾಗ್ರತೆಯಿಂದ ಜ್ಞಾನ ಸಂಪಾದಿಸಿ ಸಮಾಜದಲ್ಲಿ ಉತ್ತಮ ಸಾಧಕರಾಗಬೇಕು ಪ್ರಯೋಗಾಲಯದ ಜ್ಞಾನವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಡೆದು ಇತರ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಬೇಕು ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಗ್ರಾ ಪಂ ಅಳದಂಗಡಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಗ್ರಾ ಪಂ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಇಂಜಿನಿಯರ್ ಪ್ರತೀಕ್ ಶೆಟ್ಟಿ ನೊಚ್ಚ, ಪ್ರೌಢಶಾಲಾ ಹಿರಿಯ ಶಿಕ್ಷಕರಾದ ಚಂದ್ರಶೇಖರ್ ರಾವ್ ಉಪಸ್ಥಿತರಿದ್ದು ಶುಭ ಕೋರಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆ ಎಂ ವಹಿಸಿ ಎಂ ಆರ್‌ಪಿಎಲ್ ಸಂಸ್ಥೆಯ ಆಡಳಿತ ಮಂಡಳಿಗೆ ಕೃತಜ್ಞತೆಯನ್ನು ಸಲ್ಲಿಸಿ ಮುಂದೆಯೂ ಕಾಲೇಜಿನ ಅಭಿವೃದ್ಧಿಗೆ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಅನುದಾನ ಒದಗಿಸಲು ಕಾರಣೀಕರ್ತರಾದ ಚೀಫ್ ಜನರಲ್ ಮ್ಯಾನೇಜರ್ ಶರತ್ ಬುಡಾಲೆ ಹಾಗೂ ಸುಸಜ್ಜಿತ ಪ್ರಯೋಗಾಲಯವನ್ನು ನಾವಿನ್ಯ ರೂಪದಲ್ಲಿ ನಿರ್ಮಿಸಿದ ಇಂಜಿನಿಯರ್ ಪ್ರತೀಕ್ ಶೆಟ್ಟಿ ನೊಚ್ಚ ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಅರ್ಥಶಾಸ್ತ್ರ ಉಪನ್ಯಾಸಕರಾದ ಹರೀಶ್ ರೈ ಸ್ವಾಗತಿಸಿದ ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ನಿರೂಪಿಸಿ, ಗಣಿತ ಉಪನ್ಯಾಸಕರಾದ ಸದಾನಂದ ಕುಲಾಲ್ ವಂದಿಸಿದರು. ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಉಪನ್ಯಾಸಕವೃಂದದವರು ಸಹಕಾರ ನೀಡಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya
error: Content is protected !!