September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ


ವೇಣೂರು: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ಇದರ ವಾರ್ಷಿಕ ಮಹಾಸಭೆ ಮಂಡಳಿಯ ಅಧ್ಯಕ್ಷ ರವಿ ಕುಮಾರ್ ಕೆ ವೈ ಇವರ ಅಧ್ಯಕ್ಷತೆಯಲ್ಲಿ ಮಂಜುಶ್ರೀ ಭಜನಾ ಮಂದಿರದಲ್ಲಿ ಜರುಗಿತು.


2023-24 ಹಾಗೂ 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ತನಿಯಪ್ಪ ರಾಣ್ಯ ಮಂಡಿಸಿದರು.
2024-25 ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಜಯಪ್ರಸಾದ್ ಕುಲಾಲ್ ಮಂಡಿಸಿದರು.
2025-26 ಹಾಗೂ 2026-27 ನೇ ಸಾಲಿನ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಆನಂದ ಟೈಲರ್ ನೀಲಂಬೋಡಿ, ಗೌರವಾಧ್ಯಕ್ಷರಾಗಿ ಅನಿಲ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಿವಪ್ರಸಾದ್ ಹೆಗ್ಡೆ ನೆಲ್ಲಿಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ ಗೋಳಿಯಂಗಡಿ, ಕೋಶಾಧಿಕಾರಿಯಾಗಿ ಸಂತೋಷ್ ಕುಲಾಲ್ ಕಲ್ಲಾಜೆ, ಜೊತೆ ಕಾರ್ಯದರ್ಶಿಯಾಗಿ ನಿರಂಜನ್ ಸಾಲಿಯಾನ್ ಪಾರೊಟ್ಟು ಪದಾಧಿಕಾರಿಗಳಾಗಿ ಆಯ್ಕೆಯಾದರು.

ರವಿಕುಮಾರ್ ಕೆ ವೈ, ತನಿಯಪ್ಪ ರಾಣ್ಯ, ಧರ್ಣಪ್ಪ ಪೂಜಾರಿ, ತಿಮ್ಮಪ್ಪ ಪೊಸಲಾಯಿ, ಚಂದ್ರ ದೇವಾಡಿಗ, ಜಗದೀಶ್ ಆಚಾರ್ಯ, ಸಂಜೀವ ಪೂಜಾರಿ, ವರದ ಕುಲಾಲ್, ಹರೀಶ್ ಕುಲಾಲ್, ಹರೀಶ್ ಆಚಾರ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.


ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರವಿಕುಮಾರ್ ಕೆ ವೈ ರವರು ಮಾತಾಡುತ್ತಾ , ಕಳೆದ ಎರಡು ವರ್ಷಗಳಿಂದ ಮಂಡಳಿಯು ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಿದ್ದು ಮಂಡಳಿಯ ಪದಾಧಿಕಾರಿಗಳು ಹಾಗೂ ಊರ ಭಕ್ತಾಭಿಮಾನಿಗಳು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಸ್ಮರಿಸಿದರು. ಹಿರಿಯರಾದ ಕೆ ವೈ ಈಶ್ವರ ಭಟ್ ರವರು ಉಪಸ್ಥಿತರಿದ್ದರು.
ಜಗನ್ನಾಥ ದೇವಾಡಿಗರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ಭರತ್ ರಾಜ್ ಅಮೈ ಸ್ವಾಗತಿಸಿದರು. ಸಂತೋಷ್ ಕುಲಾಲ್ ಧನ್ಯವಾದ ಸಮರ್ಪಿಸಿದರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya
error: Content is protected !!