24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕ ಶಶಿಧರ್ ಮಾತನಾಡಿ ವಿದ್ಯಾರ್ಥಿ ಸರ್ಕಾರದ ರಚನೆಯಿಂದ ಮಕ್ಕಳಿಗೆ ಜವಾಬ್ದಾರಿ ದೊರೆಯುತ್ತದೆ,ಶಾಲಾ ಮಕ್ಕಳ ಪ್ರತಿ ಮಗುವಿನ ಮೌಲ್ಯಮಾಪನಕ್ಕು ಶಾಲಾ ಸಂಸತ್ತು ಸಹಕರಿಯಾಗಲಿದೆ ಚುನಾವಣೆ ಅರಿವು ಮೂಡಿದಂತಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಶಿಧರ್ ರವರ ವತಿಯಿಂದ ಪ್ರತಿ ವರ್ಷದಲ್ಲಿ ಶಾಲೆಯ ಓರ್ವ ಪ್ರತಿಭಾವಂತ ಮಗುವಿಗೆ ಪ್ರತಿವರ್ಷದಂತೆ 1000 ರೂಪಾಯಿ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶೀನಪ್ಪ ಗೌಡ ರವರು ವಿದ್ಯಾರ್ಥಿ ಸರ್ಕಾರದಲ್ಲಿ ವಹಿಸಿಕೊಂಡ ಖಾತೆಗಳನ್ನು ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕು ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ವಿದ್ಯಾರ್ಥಿ ಸರಕಾರದ ಪಾತ್ರ ಅತ್ಯಂತ ಮುಖ್ಯವಾದದ್ದು ಎಂದು ತಿಳಿಸಿದರು. ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಶೀಲಾ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು . ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ರವರು ಖಾತೆಗಳ ಜವಾಬ್ದಾರಿಯನ್ನು ತಿಳಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶಾಲಾ ಶಿಕ್ಷಕರದ ಗೌರಿಶ್ ರವರು ಧನ್ಯವಾದವಿತ್ತರು. ಶಾಲಾ ಶಿಕ್ಷಕಿಯಾದ ಪುಷ್ಪಲತಾ ನಿರೂಪಿಸಿದರು. ಶಾಲೆಯ ಶಿಕ್ಷಕರು ಸಹಕರಿಸಿದರು.

Related posts

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya
error: Content is protected !!