32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

ಧರ್ಮಸ್ಥಳ : ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಗ್ರಾಮ ಪಂಚಾಯಿತಿ ರಸ್ತೆಗಳ ಬದಿಗಳಲ್ಲಿ ಅನಧಿಕೃತವಾಗಿ ಹಾಕಿರುವ ಬ್ಯಾನರ್, ಬಂಟಿಂಗ್ಸ್ ಜಾಹೀರಾತು ಫಲಕ, ಇತರ ನಾಮ ಫಲಕಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ರವರು ತೆರವುಗೊಳಿಸಿದರು.


ಅನಧಿಕೃತ ಬ್ಯಾನರ್ ತೆರವುಗೊಳಿಸುವಂತೆ ಈ ಮೊದಲೇ ಗ್ರಾಮ ಪಂಚಾಯಿತಿಯಿಂದ ಪತ್ರಿಕಾ ಪ್ರಕಟಣೆ ಹಾಗೂ ಧ್ವನಿವರ್ಧಕಗಳ ಮೂಲಕ ಸೂಚನೆಯನ್ನು ನೀಡಲಾಗಿತ್ತು. ಸದ್ರಿ ಜಾಹೀರಾತು ಫಲಕಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಹಾಗೂ ಅನಧಿಕೃತ ವಸತಿ ಗ್ರಹಗಳಿಂದ ತೊಂದರೆ ಆಗುತ್ತಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿದ್ದು. ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಯಿತು. ಈ ಹಿಂದೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಹಾಕಿರುವ ಅನಧಿಕೃತ ಗೂಡಂಗಡಿಗಳನ್ನು ಕೂಡ ತೆರವುಗೊಳಿಸಲಾಗಿತ್ತು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಿದರು.


ಈ ಸಂದರ್ಭದಲ್ಲಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಿಬ್ಬಂದಿಗಳಾದ ದೇವಪ್ರಸಾದ್ ಬೊಲ್ಮ, ಶಿವಾನಂದ, ಗಜಾನನ, ವಂದನಾ, ಶೇಖರ, ಮಹಮ್ಮದ್ ಶಾಫಿ, ನಾಗರಾಜ, ಶೇಖರ ಗೌಡ, ದಿನೇಶ್, ಜಗನ್ನಾಥ, ಡಿ.ಎಸ್ ಬಾಬು, ಸುಲೇಮಾನ್, ವೀರಪ್ಪ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya
error: Content is protected !!