37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯ

ಮಾದಕ ದ್ರವ್ಯ ವಿರೋಧಿ ದಿನಾಚರಣೆ


ಮೇಲ0ತಾಬೆಟ್ಟು :ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೇಂಜರ್ಸ್ ಘಟಕ, ಎನ್ ಸಿ ಸಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಾಗೂ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಯಿತು.

ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶ್ರೀಯುತ ಬಿ.ಜಿ. ಸುಬ್ಬಾಪುರ ಮಠ ಜಾಗೃತಿ ಮೂಡಿಸಿದರು. ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ ಅಧ್ಯಕ್ಷತೆಯನ್ನು ವಹಿಸಿ ಮಾದಕ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವವಾಗಿದೆ ಎಂದು ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಸ್ವಾಗತಿಸಿ, ಯುವರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ರವಿ. ಎಂ.ಎನ್., ವಂದಿಸಿದರು. ಎನ್‌ಸಿಸಿ ಸಂಯೋಜಕರಾದ ಪ್ರೊ. ಸುಧಾರಾಣಿ, ಪೊಲೀಸ್ ಸಿಬ್ಬಂದಿಗಳಾದ ಶ್ರೀಮತಿ ಶ್ವೇತಾ, ಶ್ರೀ ವಿಶ್ವನಾಥ್, ಶ್ರೀ ಜಗದೀಶ, ಶ್ರೀ ಹನುಮಂತ ಹಾಗೂ ಕಾಲೇಜಿನ ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು :ಬ್ರಹತ್ ಉಚಿತ ವೈದ್ಯಕೀಯ ಹೃದಯ ರೋಗ ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!