September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಕಾರದಲ್ಲಿ ಕಣಿಯೂರಿನ ಕೊಡಿಯಲ್ ಎಂಬಲ್ಲಿ ವಿಸ್ತೃತ ಡೈರಿ ಉದ್ಘಾನೆ ಹಾಗೂ ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ ಜೂ.25ರಂದು ನಡೆಯಿತು. ಮಂಗಳೂರು ದ.ಕ.ಹಾ.ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ ವಿಸ್ತೃತ ಡೈರಿ ಉದ್ಘಾಟಿಸಿ ಶುಭಾ ಹಾರೈಸಿದರು.

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಚೈತ್ರ ಎಂ.ಜಿ.ಅಧ್ಯಕ್ಷತೆ ವಹಿಸಿದ್ದರು. ದ.ಕ.ಹಾ.ಒಕ್ಕೂಟ ಉಪವ್ಯವಸ್ಥಾಪಕ ಡಾ. ಸತೀಶ್ ರಾವ್ ಹೈನುಗಾರಿಕಾ ಮಾಹಿತಿ ನೀಡಿದರು. ಉಪ್ಪಿನಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಸಂಧ್ಯಾ ಹೆಗ್ಡೆ ಬ್ಯಾಂಕ್ ಸಾಲದ ಮಾಹಿತಿ ನೀಡಿದರು. ಹಾಲು ಉತ್ಪಾದಕರ ಮಾಹಿಳಾ ಸಹಕಾರ ಸಂಘದ ಸ್ಥಾಪಕಾಧ್ಯಕ್ಷೆ ರಾಜಶ್ರೀ ಎಸ್.ಹೆಗಡೆ, ಕಣಿಯೂರು ಗ್ರಾ.ಪಂ.ಅಧ್ಯಕ್ಷ ಸೀತಾರಾಮ ಮಡಿವಾಳ ಹಾಗೂ ಉಪಾಧ್ಯಕ್ಷೆ ಜಾನಕಿ, ಒಕ್ಕೂಟದ ಪಶುವೈದ್ಯ ಗಣಪತಿ ಬಿ.ಎಮ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಸಂಘ ಕಾರ್ಯದರ್ಶಿ ಭಾರತಿ, ಕಣಿಯೂರು ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಸಹಿತ ಉಪಾಧ್ಯಕ್ಷರು ನಿರ್ದೇಶಕರು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya
error: Content is protected !!