ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ : ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸ್ಥಾಪಕ ದಿನವನ್ನು ಖಿಲರ್ ಜುಮ್ಮಾ ಮಸೀದಿ ಇದರ ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಖಿಲರ್ ಜುಮ್ಮಾ ಮಸೀದಿ ಇದರ ಮುಖ್ಯ ಖತೀಬರಾದ ಹನೀಫ್ ಪೈಝೀ ಯವರು ದುವಾ ನೆರವೇರಿಸಿ ಸಮಸ್ತ ನಡೆದು ಬಂದ ದಾರಿಯನ್ನು ವಿವರಿಸಿದರು. ಅದೇ ರೀತಿ ಈ ಬಾರಿಯ ಸಮಸ್ತದ ನೂರನೇ ಶತಮಾನೋತ್ಸವ ಕಾಸರಗೋಡಿನ ಉದ್ಯಮಿಯಾದ ಇಬ್ರಾಹಿಂ ಹಾಜಿ ಕುಣಿಯವರ ವಿಶಾಲವಾದ ಮೈದಾನದಲ್ಲಿ ನಡೆಯಲಿದೆ ಎಂದರು.



ಖಿಲರ್ ಜುಮ್ಮಾ ಮಸೀದಿ ಇದರ ಪ್ರಧಾನ ಕಾರ್ಯದರ್ಶಿ ಗಳಾದ ರಝಾಕ್ ಬಿ.ಎಚ್, ಕಾರ್ಯದರ್ಶಿಗಳಾದ ಮಹಮ್ಮದ್ ಕುದ್ರಡ್ಕ, ಸಮಿತಿ ಸದಸ್ಯರುಗಳಾದ ಅಬ್ದುಲ್ ರಹಮಾನ್, ಬಶೀರ್, ಶರೀಫ್ ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.

ಅಬ್ದುಲ್ ರಹಮಾನ್ ಮದನಿ ಸ್ವಾಗತಿಸಿ, ಅಶ್ರಫ್ ಮುಸ್ಲಿಯಾರ್ ವಂದಿಸಿದರು.ಮುಖ್ಯೋಪಾಧ್ಯಾಯರಾದ ಸಿದ್ಧಿಕ್ ಅಝ್ಹರಿ ಕಾರ್ಯಕ್ರಮ ನಿರೂಪಿಸಿದರು.

Related posts

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
error: Content is protected !!