September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

ಬೆಳ್ತಂಗಡಿ: ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿರುವ ಡಾ. ದಿವಾಕರ ಕೆ. (ದಿವ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.

ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಡಾ. ಹಾಮಾನಾ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿಗಳೂ ಆಗಿದ್ದಾರೆ. ತುಳುನಾಡಿನ ವಾರ್ಷಿಕ ಆಚರಣೆಗಳ ಕುರಿತು ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ಲಭಿಸಿದೆ.

Related posts

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!