37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ , ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ದ. ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ ಹಾಗೂ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ಕಾರ್ಯಕ್ರಮ ಜೂ. 26ರಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಬೆಳ್ತಂಗಡಿ ಶಾಖೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದ. ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ ನೆರವೇರಿಸಿದರು.

ದ ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ದ. ಕ. ಸಹಕಾರಿ ಹಾಲು ಒಕ್ಕೂಟ ನಿರ್ದೇಶಕ ಪ್ರಭಾಕರ ಆರಂಬೋಡಿ, ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೊ, ಸವಿತಾ ಎನ್ ಶೆಟ್ಟಿ, ದ. ಕ. ಸಹಕಾರಿ ಹಾಲು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ., ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎನ್. ರಘು, ಎಸ್.ಸಿ.ಡಿ.ಸಿಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಾಲಿನ ಗುಣಮಟ್ಟ, ರಾಸುಗಳ ನಿರ್ವಹಣೆ ಮತ್ತು ಒಕ್ಕೂಟದ ಯೋಜನೆಗಳ ಸೌಲಭ್ಯಗಳ ಬಗ್ಗೆ ಪುತ್ತೂರು ದ.ಕ ಹಾಲು ಒಕ್ಕೂಟ ಉಪ ವ್ಯವಸ್ಥಾಪಕ ಡಾ. ಸತೀಶ್ ರಾವ್ ಮಾಹಿತಿ ನೀಡಿದರು.

ಲೆಕ್ಕಪತ್ರಗಳ ನಿರ್ವಹಣೆ, ಮುಖ್ಯ ಕಾರ್ಯನಿರ್ವಾಹಕರ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ದ.ಕ ಹಾಲು ಒಕ್ಕೂಟ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೆ. ಸುಬ್ಬರಾವ್ ಮಾಹಿತಿ ನೀಡಿದರು.

ಈ ವೇಳೆ ದ. ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾದ ಉದಯ ಕೋಟ್ಯಾನ್ ರವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ ಹಿರೇಮಠ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!