23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

ಕೊಯ್ಯೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಮತ್ತು ಬೆಳ್ತಂಗಡಿ ಹೋಬಳಿ ಘಟಕ ಹಾಗೂ ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು- ಸಂಯುಕ್ತ ಆಶ್ರಯದಲ್ಲಿ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1 ಕಾರ್ಯಕ್ರಮವು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಪ್ರಾಂಶುಪಾಲ ಮೋಹನ ಗೌಡ ನೆರವೇರಿಸಿ ಎಲ್ಲಾ ಉಪನ್ಯಾಸಮಾಲೆ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಜಿರೆ ಶ್ರೀ ಧ.ಮ. ಕಾಲೇಜಿನ ಕನ್ನಡ ಸಹ ಪ್ರಾಧ್ಯಾ ಪಕರಾದ ಡಾ. ದಿವ ಕೊಕ್ಕಡ ರವರು “ಕುವೆಂಪು ಅವರ ಜೀವನ ಹಾಗೂ ಸಾಹಿತ್ಯ ಇಂದಿನ ಗ್ರಾಮೀಣ ಬದುಕಿಗೆ ಹಿಡಿದ ಕೈಗನ್ನಡಿಯಂತಿದೆ. ಜಾತಿ, ಧರ್ಮ ಮೇಲು-ಕೀಳು ಎಂಬ ಬೇಧ-ಭಾವವಿಲ್ಲದೆ ಕುವೆಂಪು ರವರ ಆಶಯದಂತೆ ವಿಶ್ವ ಮಾನವರಾಗೋಣ” ಎಂಬುದಾಗಿ ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಡಿ. ಯದುಪತಿ ಗೌಡರವರು “ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡು-ನುಡಿ, ಭಾಷೆ, ಸಾಂಸ್ಕೃತಿಕ ವೈವಿದ್ಯ ತೆಯನ್ನು ಗುರುತಿಸಿ, ಬೆಳೆಸಲು ಪ್ರೋತ್ಸಾಹಿಸುತ್ತದೆ. ರಾಷ್ಟ್ರ ಕವಿ ಕುವೆಂಪು ಅವರು ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳಲ್ಲಿ ಕೈಯಾಡಿಸಿ ಭಾಷಾ ಪ್ರೌಡಿಮೆ ಯನ್ನು ಮೆರೆದಿದ್ದಾರೆ”ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಭೂತ ಪೂರ್ವ ಸಾಧನೆಗಾಗಿ ಡಿ.ಯದುಪತಿ ಗೌಡರವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ರವರು ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರಾದ, ವಿನಯ, ಚಿರಸ್ವಿ, ವಿದ್ಯಾ, ಐಶ್ವರ್ಯ ಪ್ರಾರ್ಥನೆಗೈದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪವಿತ್ರ ಸ್ವಾಗತಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು.

Related posts

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya
error: Content is protected !!