September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಇತರ ಸಂಘಗಳ ಉದ್ಘಾಟನೆಯು ಜೂ.27 ರಂದು ನಡೆಯಿತು.


ಉದ್ಘಾಟಕರಾಗಿ ಆಗಮಿಸಿದ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯರಾದ ಶಂಭು ಶಂಕರ ಅವರು, ‘ದೇಶದ ಬೆಳವಣಿಗೆಗೆ ವಿದ್ಯಾವಂತ ಯುವಕರ ಪಾಲ್ಗೊಳ್ಳುವಿಕೆ ನಿರ್ಣಾಯಕವಾದುದು, ಸೇವಾಮನೋಭಾವನೆ, ನಾಯಕತ್ವ ಹಾಗೂ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಳ್ಳಬೇಕು’ ಎಂದರು. ವಿದ್ಯಾರ್ಥಿ ನಾಯಕರಿಗೆ ಕಾಲೇಜಿನ ಪ್ರಾಂಶುಪಾಲೆ ಗೀತಾ ಪ್ರಮಾಣವಚನ ಬೋಧಿಸಿ, ಶುಭ ಹಾರೈಸಿದರು.

ವಿದ್ಯಾರ್ಥಿ ಸಂಘದ ಸಲಹೆಗಾರರಾದ ಪುರುಷೋತ್ತಮ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಹಿಸಿದ್ದರು. ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿ ಪ್ರತಿನಿಧಿಗಳ ಪರವಾಗಿ ಮೋಕ್ಷಿತಾ ತಮ್ಮ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದರು. ಉಪನ್ಯಾಸಕಿ ನಮಿತಾ ಕೆ. ಆರ್ ನಿರೂಪಿಸಿದರು. ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಪುಷ್ಪ ನೀಡಿ ಗೌರವಿಸಿದರು. ಉಪನ್ಯಾಸಕ ಪದ್ಮನಾಭ ಬಿ.ಕೆ. ವಂದಿಸಿದರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya
error: Content is protected !!