September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

ಧರ್ಮಸ್ಥಳ: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಗೆ 175 ನೇ ವರ್ಷ ತುಂಬಿದ ಪ್ರಯುಕ್ತ ಸಂಭ್ರಮಾಚರಣೆಯು ಬರುವ ಸೆಪ್ಟೆಂಬರ್ 14 ರಂದು ವೆನ್ಲಾಕ್, ಲೇಡಿಗೋಷನ್, ಕೆ. ಎಮ್.ಸಿ. ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಯ ಅಧ್ಯಕ್ಷರುಗಳು, ಜಿಲ್ಲೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಮುಂದಿನ ಭಾಗವಾಗಿ ಜೂ. 26ರಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ನೇತೃತ್ವದಲ್ಲಿ ಬೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪಲಿಯೇಟಿವ್ ಮೆಡಿಕಲ್ ಆಫೀಸರ್ ಡಾ. ಅನ್ನಯ್ಯ ಕುಲಾಲ್, ಪಿಸಿಷಿಯನ್ ಡಾ.ವಿಜಯ ಕುಮಾರ್, ರಕ್ಷಾ ಸಮಿತಿಯ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಶಶಿದರ್ ಬಜಾಲ್, ಅಬ್ದುಲ್ ಸಲೀಮ್, ಶ್ರೀಮತಿ ಪ್ರಮೀಳಾ, ದಾಮೋದರ್ ಪುತ್ತೂರು, ಜಯರಾಮ ಬೆಳ್ತಂಗಡಿ, ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಸಹಾಯಕ ಆಡಳಿತಾಧಿಕಾರಿಗಳಾದ ಶ್ರೀಮತಿ ವಿದ್ಯಾ ಬಿ,ಕಛೇರಿ ಅಧೀಕ್ಷಕರಾದ ಅಶೋಕ್ ರಾಜನಾಲ್, ದ್ವಿತೀಯ ದರ್ಜೆ ಸಹಾಯಕ ಎ.ಕ್ಲೆರೆನ್ಸ್ ರಾಜ್,ಸಿಬ್ಬಂದಿ ಸಿದ್ದಪ್ಪ ಹಾಗೂ ಉಸ್ಮಾನ್ ಕೆ.ಪಿ.ಕಾಜೂರು ಹಾಜರಿದ್ದರು.

Related posts

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya
error: Content is protected !!