22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ವತಿಯಿಂದ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ಸಹಭಾಗಿತ್ವದಲ್ಲಿ ಜೂ.27 ರಂದು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನದಲ್ಲಿ ನಡೆದ 516 ನೇ ಕೆಂಪೇಗೌಡ ಜಯಂತಿ ಆಚರಣೆ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಧ.ಮಂ.ಪ.ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಮಹಾವೀರ ಜೈನ್ ಇಚ್ಲಂಪಾಡಿ ಪ್ರಧಾನ ಭಾಷಣ ಮಾಡಿದರು. ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎ.ಪಿ.ಶ್ರೀನಾಥ್, ತಹಶೀಲ್ದಾರ್ ಪೃಥ್ವಿ ಸಾನಿಕಂ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಪೇಗೌಡ ಜಯಂತಿ ಪ್ರಯುಕ್ತ ತಾಲೂಕು ಮಟ್ಟದ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವೇಣೂರು ಸ.ಪ್ರೌ.ಶಾಲೆಯ ಶರತ್, ಪುಂಜಾಲಕಟ್ಟೆ ಪಬ್ಲಿಕ್ ಶಾಲೆಯ ಭೂಷಣ್ ದ್ವಿತೀಯ ಸ್ಥಾನ ಪಡೆದರು. ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿ.ತನೂಶ್ ರೈ, ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ರಿಧೂ, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಶೇಕ್ ಮಹಮದ್ ಶಿಯಾನ್ ತೃತೀಯ ಸ್ಥಾನ ಪಡೆದಿದ್ದು, ಅವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜೋಸೆಫ್ ಎನ್.ಎಂ. ಸ್ವಾಗತಿಸಿದರು. ಶಿಕ್ಷಕ ಧರಣೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ತಾ.ಪಂ. ಸಂಯೋಜಕ ಜಯಾನಂದ ಲಾಯಿಲ ವಂದಿಸಿದರು. ಸುಮನಾ, ಅನುಪಮ, ಹೇಮಾ ಹಾಗೂ ಅನಿತಾ ನಾಡಗೀತೆ ಹಾಡಿದರು.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya
error: Content is protected !!