September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಬೆಳ್ತಂಗಡಿ : ದೂರ ದೃಷ್ಟಿಯ ಆಡಳಿತಗಾರರಾಗಿ ಸಮೃದ್ಧವಾದ ಬೆಂಗಳೂರು ನಗರವನ್ನು ನಿರ್ಮಿಸಲು ಶ್ರಮಿಸಿದ ಕೆಂಪೇಗೌಡರು ಈ ನಾಡು ಕಂಡ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಆನಂದ ಗೌಡ ಹೇಳಿದರು.


ಅವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ.ರಿ ಬೆಳ್ತಂಗಡಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡುತ್ತಾ, ಕೆಂಪೇಗೌಡರು ತನ್ನ ಆಡಳಿತ ಕೌಶಲ್ಯದಿಂದ ಬೆಂಗಳೂರನ್ನು ವ್ಯಾಪಾರ, ವಾಣಿಜ್ಯ, ಕೃಷಿ ಚಟುವಟಿಕೆಗಳ ಕೇಂದ್ರವನ್ನಾಗಿ ಮಾಡಿದ್ದಲ್ಲದೆ ಜನರ ಬಳಕೆಗೆ ನೀರಾವರಿಗಾಗಿ ಹಲವಾರು ಕೆರೆಗಳನ್ನು ನಿರ್ಮಿಸಿದ್ದರು. ಪ್ರತಿಯೊಂದು ವೃತ್ತಿ ಬಾಂಧವರಿಗೂ ಇಲ್ಲಿ ಮಹತ್ವವನ್ನು ನೀಡಿದ್ದು ಪ್ರಜಾ ಹಿತವನ್ನು ಕಾಪಾಡಿದ್ದರು. ಇಂದು ಶಿಕ್ಷಣ, ಉದ್ಯಮ ಕ್ಷೇತ್ರಗಳಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತಿರುವ ಬೆಂಗಳೂರಿನಡೆಗೆ ಇಡೀ ಜಗತ್ತೇ ಕಣ್ಣು ಹಾಯಿಸುವಂತಾಗಿದೆ. ಇದೆಲ್ಲರ ನಿರ್ಮಾತೃ ಕೆಂಪೇಗೌಡರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಿದೆ ಎಂದರು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಜಯಾನಂದ ಗೌಡ.ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ ಅನಾರ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ಮಾಜಿ ಕಾರ್ಯದರ್ಶಿ ದುಗ್ಗಪ್ಪ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಹಾಸಿನಿ ಉಪಸಿತರಿದ್ದರು.


ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಧನ್ಯವಾದವಿತ್ತರು. ಉಪನ್ಯಾಸಕ ಬೆಳಿಯಪ್ಪ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya
error: Content is protected !!