September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

ಉಜಿರೆ: ಅನುಗ್ರಹ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂ.27 ರಂದು ಅ ಅನುಗ್ರಹ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾಗಿ ಹಾಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮರ್ಲಿನ್ ಡಿಸೋಜಾಇವರು ಉಪಸ್ಥಿತರಿದ್ದರು


ಹೊಸದಾಗಿ ಆಯ್ಕೆಯಾದ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮಂತ್ರಿಮಂಡಲದ ನೂತನ ಸದಸ್ಯರಿಗೆ ಶಾಲಾ ಪ್ರಾಂಶುಪಾಲರಾದವಂ ಫಾ ವಿಜಯ್ ಲೋಬೋ ಇವರ ಪ್ರಮಾಣ ವಚನವನ್ನು ಬೋಧಿಸಿದರು.
ಪ್ರೌಢಶಾಲಾ ವಿದ್ಯಾರ್ಥಿ ನಾಯಕಿಯಾಗಿ ಕುಮಾರಿ ಮಿಶೆಲ್ ಪಿಂಟೋ ಉಪನಾಯಕನಾಗಿ ಶೌರ್ಯ ಕಾಮತ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಯ ನಾಯಕಿಯಾಗಿ ಕುಮಾರಿ ಸಿಂಚನ ಉಪನಾಯಕನಾಗಿ ಸುಹಾನ್ ಮೊಂತೆರೊ ಹಾಗೂ ಇವರ ಜೊತೆಯಲ್ಲಿ ಮಂತ್ರಿಮಂಡಲದ ಇತರ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.


ಯುವ ನಾಯಕತ್ವದ ಭದ್ರತೆ ಕರ್ತವ್ಯ, ಜವಾಬ್ದಾರಿ ಹಾಗೂ ಅದರ ಅಗತ್ಯದ ಬಗ್ಗೆ ಮತ್ತು ಶಾಂತಿ ಸೌಹಾರ್ದತೆಯಿಂದ ರಾಷ್ಟ್ರಾಭಿಮಾನವನ್ನು ಮೈಗೂಡಿಸಿ ಇಂದಿನ ಯುವಪೀಳಿಗೆ ಬೆಳೆಯಬೇಕಾಗಿದೆ ಎಂದು ಸಂಚಾಲಕರಾದ ವಂ ಫಾ ಅಬೆಲ್ ಲೋಬೊ, ಮುಖ್ಯ ಅತಿಥಿಯಾದ ಮರ್ಲಿನ್ ಡಿಸೋಜಾ ಎಂದು ತಿಳಿಸಿದರು. ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ಇವರು ಮಂತ್ರಿಮಂಡಲದ ಸದಸ್ಯರಿಗೆ ತಮ್ಮ ಕರ್ತವ್ಯದ ಬಗ್ಗೆ ತಿಳಿಸಿದರು. ಪ್ರಮಾಣವಚನ ಸ್ವೀಕರಿಸಿದ ಮಂತ್ರಿಮಂಡಲದ ಸರ್ವಸದಸ್ಯರಿಗೆ ಶುಭವನ್ನು ಹಾರೈಸಿದರು. ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಮಡಂತ್ಯಾರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya
error: Content is protected !!