September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಉಜಿರೆಯಲ್ಲಿ ವೈದ್ಯ ಹಾಗೂ ಆಧ್ಯಾತ್ಮಿಕ ಮಾರ್ಗದರ್ಶಕರಾಗಿರುವ ಡಾ.ಪ್ರದೀಪ್ ನಾವರ ಅವರು ಜೂ.27 ರಂದು 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು.

ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ನಾವು ಪಡೆದಿರುವ ಜ್ಞಾನ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ಎಲ್ಲರೊಳಗೆ ಒಂದಾಗಲು ಸಂಘಗಳು ಪ್ರೇರಕ” ಎಂದು ಹೇಳಿದರು.

ಶಾಲೆಯ ವಿವಿಧ ಸಂಘಗಳಾದ ಸಾಂಸ್ಕೃತಿಕ ಸಂಘ, ಭಿತ್ತಿ ಪತ್ರಿಕೆ ಸಂಘ, ಕಲಾ ಸಂಘ, ಹವ್ಯಾಸ ಸಂಘ, ಕ್ರೀಡಾ ಸಂಘ, ಇಂಟೆರಾಕ್ಟ್ ಸಂಘ, ಪರಿಸರ ಸಂಘ, ಕನ್ನಡ ಸಂಘ, ವಿಜ್ಞಾನ ಸಂಘ, ಸಾಹಿತ್ಯ ಸಂಘ, ಗಣಿತ ಸಂಘ ಇವುಗಳ ಉದ್ಘಾಟನೆ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ಅಕ್ಷಮ್ ಜೈನ್ ಹಾಗೂ ಅವನಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಸಾವನ್ ವಂದಿಸಿದರು.

Related posts

ನಾಳೆ( ಜೂ.24): ವಿದ್ಯುತ್ ನಿಲುಗಡೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya
error: Content is protected !!