23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ ಸಮರ್ಥ್ ಆರ್ ಗಾಣಿಗೇರ್ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು.

ದಿನಾಚರಣೆಯ ಪ್ರಯುಕ್ತ ಧರ್ಮಸ್ಥಳ ಪೊಲೀಸ್ ಠಾಣೆಯವರು ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿರುತ್ತಾರೆ.


ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆಯ ಸಂಚಾಲಕ ನಾರಾಯಣ ಫಡ್ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರೇಂಜರ್ ಲೀಡರ್ ವಸಂತಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ. ಅರ್ ಧನ್ಯವಾದಗೈದರು.

Related posts

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
error: Content is protected !!