25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಜೂ. 28ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸೀತಾರಾಮ್ ಕೇವಳ ರವರು ಒಳ್ಳೆಯ ಶಿಕ್ಷಣ ಹೇಗಿರಬೇಕು, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳನ್ನು ಉತ್ತಮ ಮನುಷ್ಯನಾಗಿ ಮಾರ್ಪಾಡುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರದ ಕುರಿತು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ಶಾರೀರಿಕ ಬೆಳವಣಿಗೆಯ ಪ್ರಾಮುಖ್ಯ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆ ರವರು ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ನೋಟರಿ, ವಕೀಲರು ಬೆಳ್ತಂಗಡಿ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಲತಾ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಲಕ್ಷ್ಮೀನಾರಾಯಣ ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಕಳೆದ ಶೈಕ್ಷಣಿಕ ವರ್ಷದಲ್ಲಿ ವಾಣಿ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಮೊಹನಾಂಗಿ ಶಿಕ್ಷಕ-ರಕ್ಷಕ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ವಂದಿಸಿದರು. ಶಿಕ್ಷಕಿ ಶ್ರೀಮತಿ ಮಮತಾ ನಿರೂಪಿಸಿದರು. ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.

Related posts

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!