38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿ ಸೋಜ “ವಿದ್ಯಾರ್ಥಿ ಜೀವನದಲ್ಲಿ ವಹಿಸಿಕೊಂಡ ನಾಯಕತ್ವವೆಂಬ ಜವಾಬ್ದಾರಿ ಅವರ ಮುಂದಿನ ಜೀವನದಲ್ಲಿ ಶಿಸ್ತು, ಸಂಯಮ, ಸಂವಹನ ಮುಂತಾದ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕರಿಸುತ್ತದೆ”ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವo. ಡಾ. ಆಲ್ವಿನ್ ಸೆರಾವೋ ಮಾತನಾಡಿ “ನಾಯಕತ್ವ ಗುಣ ತನ್ನಿಂದ ತಾನೆ ಯಾವತ್ತೂ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು.ಈಗ ಸಿಕ್ಕಿದ ಈ ಅವಕಾಶವನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಕು. ಗ್ಲೆನಿಷಾ, ಉಪನಾಯಕ ಕು. ಪ್ರಜ್ವಿ‌‌ತ್, ಕಾರ್ಯದರ್ಶಿ ಕು. ಶೈಲಿ ಉಪಸ್ಥಿತರಿದ್ದರು.ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೇಮತಿ ಸೋನಿಯಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Related posts

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya
error: Content is protected !!