23.9 C
ಪುತ್ತೂರು, ಬೆಳ್ತಂಗಡಿ
September 30, 2026
ಶಾಲಾ ಕಾಲೇಜು

ಕೆಂಪೇಗೌಡರ ಭಾವಚಿತ್ರ ಚಿತ್ರಿಸುವ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ :ಸರ್ವಶ್ರೇಷ್ಠ ದಾರ್ಶನಿಕ – ಅಪ್ರತಿಮ ಆಡಳಿತಗಾರ, ಬೆಂಗಳೂರು ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೆಯ ಜಯಂತ್ಯೋತ್ಸವವನ್ನು ಘನ ಕರ್ನಾಟಕ ಸರಕಾರದ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣೆ ಸಮಿತಿಯು ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಕೆಂಪೇಗೌಡರ ಭಾವಚಿತ್ರ ಚಿತ್ರಿಸುವ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಭೂಷಣ್ ವಿದ್ಯಾರ್ಥಿ ಗುರುವಾಯನಕೆರೆಯ ಕರುಣಾಕರ್ ಜಿ ಕುಲಾಲ್ ಹಾಗೂ ಶ್ರೀಮತಿ ಕವಿತಾ ಇವರ ಸುಪುತ್ರ. ಪೂಂಜಾಲಕಟ್ಟೆ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ಸದಾನಂದ ಬಿರಾದಾರ ಇವರ ಮಾರ್ಗದರ್ಶನದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.


ಈ ವಿದ್ಯಾರ್ಥಿಗೆ ಬೆಳ್ತಂಗಡಿ ತಾಲೂಕ್ ಮಟ್ಟದ ಆಚರಣೆಯ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್ , ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಜ ಯಾನಂದ ಗೌಡ, ಬೆಳ್ತಂಗಡಿ ತಾಲೂಕು ತಹಶೀಲ್ದಾರರಾದ ಪೃಥ್ವಿ ಸಾನಿಕಂ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಉಪನ್ಯಾಸಕರಾದ ಮಹಾವೀರ ಜೈನ್ ಇಚ್ಲಲಂಪಾಡಿ ಹಾಗೂ ಗಣ್ಯರು ಜೊತೆ ಸೇರಿ ಈ ಗೌರವವನ್ನು ಸಲ್ಲಿಸಿರುತ್ತಾರೆ ಇವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರು ಹಾಗೂ ವಿಜೇತ ವಿದ್ಯಾರ್ಥಿಗೆ ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಶುಭಾಶಯಗಳನ್ನು ಹಾರೈಸಿದರೆ

Related posts

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆ ನೂತನ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!