September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಎಸ್ ಡಿಎಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.30 ರಂದು ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ ನೆರವೇರಿಸಿ ಕಾನೂನಿನ ಬಗ್ಗೆ ತಿಳಿದುಕೊಂಡರೆ ನಮಗೆ ಸಿಗಬೇಕಾದ ಹಕ್ಕನ್ನು ನಾವು ಪಡೆದುಕೊಳ್ಳಲು ಸಾಧ್ಯ. ಕಾನೂನಿನ ಬಗ್ಗೆ ತಿಳಿದು ನಿಮ್ಮ ಹಿರಿಯರಿಗೆ ಕಿರಿಯರಿಗೆ ಹೇಳಿದರೆ ಈ ಕಾರ್ಯಕ್ರಮವು ಸಾರ್ಥಕತೆಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೀತಿನ್ ಜೆಜೋ ವಕೀಲರ ಬೆಳ್ತಂಗಡಿ ಇವರು ಬಾಲಕಾರ್ಮಿಕರೆಂದರೆ ಯಾರು? ಬಾಲ ಕಾರ್ಮಿಕರ ಹಕ್ಕುಗಳ ಬಗ್ಗೆ ಮತ್ತು ಮಕ್ಕಳು ಮತ್ತು ಹದಿ ಹರೆಯದವರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಯ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ , ಬೆಳ್ತಂಗಡಿ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯನಿ ಜೆಸಿಂತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯಾದ ಶ್ರೀಮತಿ ಪ್ರವೀಣಾ ಕಾಮತ್ ಸ್ವಾಗತಿಸಿ, ಶಿಕ್ಷಕಿ ಅಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!