September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ. 28 ರಂದು ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯಾ ವಹಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಸಮಾಜ ಸೇವಕರು ನೋರ್ಬರ್ಟ್ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು.

ಘಟಕದ ಸೇವಾಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂಡುಕೋಡಿ ನೆಲ್ಲಿಗುಡ್ಡೆ ಸುಂದರ ಪೂಜಾರಿ ದಂಪತಿಗಳಿಗೆ ನೀಡಲಾಯಿತು. ವೇದಿಕೆಯಲ್ಲಿ ಶ್ರೀ ಗು.ನಾ ಸ್ವಾ. ಸೇ ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿನೋಧ ಕುಮಾರಿ, ಖ್ಯಾತ ಜೋತಿಷ್ಯರಾದ ಗಣೇಶ್ ನಾರಾಯಣ ಪಂಡಿತ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ , ಮೂಡುಕೋಡಿ ಬಿಲ್ಲವ ಸಂಘದ ಅಧ್ಯಕ್ಷ ರವಿ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ನಿರೂಪಿಸಿ, ಸಲಹೆಗಾರರು ರಾಕೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ವಂದಿಸಿದರು.

Related posts

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
error: Content is protected !!