23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

ಉರುವಾಲು : ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಇದರ ಉದ್ಘಾಟನಾ ಸಮಾರಂಭ ಜೂ. 28 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ರಾಘವ ಎಸ್.ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಬಳಿಕ ವಿಶೇಷ ಅತಿಥಿಗಳಾಗಿ ಆಗಮಿಸಿದ ದಿವಾಕರ ಆಚಾರ್ಯ ಮಾತನಾಡಿ ಯಕ್ಷಗಾನದ ಬಗ್ಗೆ ವಿಶೇಷ ಮಾಹಿತಿ ವಿದ್ಯಾರ್ಥಿಗಳಿಗೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ಧರ್ಶಕ ಮಾಯಿಲ್ತೊಡಿ ಈಶ್ವರ ಭಟ್ ವಹಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಸೇವಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್, ಸದಸ್ಯರಾದ ಶಂಕರ ನಾರಾಯಣ ಭಟ್ ಸಾಮೇಗುಳಿ , ಯಕ್ಷಗಾನ ಶಿಕ್ಷಕ ದೇವಿಪ್ರಸಾದ್ ಹಾಗೂ ಶಾಲಾ ರಕ್ಷಕ ಶಿಕ್ಷಕ ಸಂಘದ ಸದಸ್ಯ ವೃಂದ ಉಪಸ್ಥಿತರಿದ್ದರು.

ಪೋಷಕ ವೃಂದ, ಶಿಕ್ಷಕ ವೃಂದ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಸ್ವಾಗತಿಸಿದರು. ಸಹ ಶಿಕ್ಷಕ ಮಂಜು ಗಣೇಶ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ನಿರೂಪಿಸಿದರು.

Related posts

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya
error: Content is protected !!