September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ ಜೂ. 28ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್‌.ಡಿ.ಎಂ ಸ್ನಾತಕೋತ್ತರ ಪದವಿ ಕಾಲೇಜಿನ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಕ್ಷತಾ.ಕೆ ರವರು ಯುವ ಮನಸ್ಸುಗಳನ್ನು ಪೋಷಕರು ಮತ್ತು ಶಿಕ್ಷಕರು ಹೇಗೆ ಪೋಷಿಸಬೇಕು, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರದ ಬಗ್ಗೆ ವಿಸ್ತಾರವಾಗಿ ತಿಳಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯ ಕುಮಾರ್ ರವರು ಮಾತನಾಡಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು ಆಧುನಿಕ ಕಲಿಕೊಪಕರಣಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸುವ ಜೊತೆಗೆ ಮೌಲ್ಯದ ಶಿಕ್ಷಣವನ್ನು ನೀಡುತ್ತಿದೆ ಎಂಬುದನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ. ಆರ್. ರವರು ವಿದ್ಯಾರ್ಥಿಗಳು ಪಾಲಿಸಬೇಕಾದ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪೋಷಕರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಪುನರ್ವಸು 2.0 – ಇಂದ್ರಿಯ ಆರೋಗ್ಯವನ್ನು ಮುನ್ನೆಲೆಗೆ ತರುವ ಅಂತಾರಾಷ್ಟ್ರೀಯ ಆಯುರ್ವೇದ ಸಮ್ಮೇಳನ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya
error: Content is protected !!