25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

ಉಜಿರೆ: ಹದಿಹರೆಯದ ವಿದ್ಯಾರ್ಥಿಗಳು ತಮ್ಮ ವಯಸ್ಸಿಗನುಗುಣವಾಗಿ ಬಾಲಿಶ ವರ್ತನೆ ತೋರದೆ ಹಾಗೂ ದುಶ್ಚಟಗಳಿಗೆ ಬಲಿಯಾಗದೆ ಸರಿಯಾದ ಹೆಜ್ಜೆಯನ್ನು ಇಡಬೇಕು. ನಮ್ಮ ವಿವೇಚನೆ ನಮ್ಮ ಕೈಯಲ್ಲಿ ಇರಬೇಕು. ಎಲ್ಲ ಯುವಕ ಯುವತಿಯರು ಬಾಹ್ಯ ಆಕರ್ಷಣೆಗೆ ಒಳಗಾಗದೆ ನಮ್ಮ ಸಾಧನೆಯ ಗುರಿಮುಟ್ಟುವ ಕಾರ್ಯಮಾಡಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ. ಹೇಳಿದರು.

ಇವರು ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶ ಹಾಗೂ ಮಹಿಳಾ ಅಭಿವೃದ್ಧಿ ಕೋಶಗಳ ವತಿಯಿಂದ ಎರಡು ದಿನಗಳ ಕಾಲ ನಡೆಯುವ ಲಿಂಗ ಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸಶಕ್ತ ಬದುಕಿಗೆ ಮುಖ್ಯವಾಗಿ ಆರೋಗ್ಯ ಹಾಗೂ ಶಿಕ್ಷಣ ಪ್ರಧಾನ. ಯುವಕ ಯುವತಿಯರು ಜೀವನ ಕೌಶಲ್ಯ ಶಿಕ್ಷಣ ಪಡೆಯಬೇಕು. ದೈಹಿಕ ಹಾಗೂ ಮಾನಸಿಕ ಬದಲಾವಣೆಗಳನ್ನು ನಿಭಾಯಿಸುವುದು ಮತ್ತು ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತರಬೇತುದಾರರಾದ ಮಂಗಳೂರಿನ ಸಂವಾದ ಸಹಯಾನ ಯೋಜನೆಯ ಯುವ ಕ್ರಿಯಾ ವಿಭಾಗದ ಸಂಚಾಲಕರಾದ ಮಂಜುಳಾ ಸುನಿಲ್ ಹೇಳಿದರು.

ಸಂವಾದ ಸಂಸ್ಥೆಯ ತರಬೇತುದಾರರಾದ ಯೋಗೀಶ್ ಮಲ್ಲಿಗೆಮಾಡು , ಕೃಷ್ಣ ಆಳ್ವ , ಉದಯ ಕುಮಾರ್ , ಮಲ್ಲಿಕಾ ಜ್ಯೋತಿಗುಡ್ಡೆ ಹಾಗೂ ಪವಿತ್ರಾ ಜ್ಯೋತಿಗುಡ್ಡೆ ಇವರು ಉಪಸ್ಥಿತರಿದ್ದರು.

ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶದ ಸಂಚಾಲಕ ಡಾ. ಪ್ರಸನ್ನಕುಮಾರ ಐತಾಳ್ ಕಾರ್ಯಕ್ರಮ ಸಂಯೋಜಿಸಿದರು.
ಮಹಿಳಾ ಅಭಿವೃದ್ಧಿ ಕೋಶದ ಸದಸ್ಯರಾದ ಭೌತಶಾಸ್ತ್ರ ಉಪನ್ಯಾಸಕಿ ಅಮೃತಾ ಶೆಟ್ಟಿ ನಿರೂಪಿಸಿ , ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ಯಾಮಿಲಾ ವಂದಿಸಿದರು.

Related posts

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!