September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿ ಸ್ವಚ್ಚ ಭಾರತ ಅಭಿಯಾನ ಕಾರ್ಯರೂಪಕ್ಕೆ ಬರಬೇಕಾದರೆ ಪ್ರತಿಯೊಬ್ಬರೂ ಸ್ವಚ್ಚತೆಯನ್ನು ದೈನಂದಿನ ಚಟುವಟಿಕೆಗಳ ಭಾಗವಹಿಸಿ ಜವಾಬ್ದಾರಿಯಿಂದ ವರ್ತಿಸಬೇಕು ಹಾಗೂ ಇತರರನ್ನು ಸ್ವಚ್ಚತೆ ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಅಭ್ಯಾಸಗಳನ್ನು ಆಳವಡಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಸಂತೋಷ್ ಮಾತನಾಡಿ, ಸ್ವಚ್ಛ ಭಾರತದ ಮೌಲ್ಯಗಳನ್ನು ಆಳವಡಿಸಿಕೊಳ್ಳುವುದು ಸಮಗ್ರ ಶಿಕ್ಷಣದ ಒಂದು ಭಾಗವಾಗಿದೆ ಎಂದು ಹೇಳಿದರು. ಇದು ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ಮತ್ತು ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡುತ್ತದೆ ಎಂದರು.


ಇಂಗ್ಲೀಷ್ ಭಾಷಾ ಉಪನ್ಯಾಸಕರಾದ ಶಂಕರ್ ಭಟ್ ಎಚ್. ಆರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ರಾಜೇಶ್ ಕೆ.ಎ ವಂದಿಸಿದರು.

Related posts

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಎ.ಆರ್.ಎಂ ಮೋಟಾರ್ಸ್ ನಲ್ಲಿ ಕಿಯಾ ಕಂಪನಿಯ ‘ನ್ಯೂ ಸೆಲ್ಟೋಸ್’ ಕಾರು ಬಿಡುಗಡೆ

Suddi Udaya
error: Content is protected !!