25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

ಕೊಕ್ರಾಡಿ: ಶ್ರೀ, ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಕೊಕ್ರಾಡಿ ಇವುಗಳ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ರಾಜು ಪಿ. ಶೆಟ್ಟಿ ಉದ್ಘಾಟನೆ ಮಾಡಿ ಮಾತನಾಡಿ ಮುಂದಿನ ಪೀಳಿಗೆಯ ನೆಮ್ಮದಿ ಜೀವನಕ್ಕೆ ಪರಿಸರ ಸಂರಕ್ಷಣೆಯ ಮಾಹಿತಿ ನೀಡಿದರು.

ಪ್ರಸ್ತಾವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರು ಶ್ರೀಮತಿ ವಿಶಾಲ್ ಕೆ ಮಾತನಾಡಿ ಯೋಜನೆ ನಡೆದು ಬಂದ ದಾರಿ ಯೋಜನೆಯಿಂದ ಸಿಗುವ ಸೌಲಭ್ಯದ ಬಗ್ಗೆ ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಶಾಲೆಯ ಪ್ರಾಂಶುಪಾಲರಾದ ದಯಾನಂದ್ ರವರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ,ಪ್ರಾಣಿ ಪಕ್ಷಿಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವ ರೀತಿಯಲ್ಲಿ ನಾವು ಹೆಚ್ಚು ಹೆಚ್ಚು ಗಿಡ ನಾಟಿ ಮಾಡಬೇಕು ಎಲ್ಲಾ ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ದಿನದಂದು ಗಿಡ ನಾಟಿ ಮಾಡುವಂತೆ ಮಾಹಿತಿ ನೀಡಿದರು.


ಪರಿಸರ ಸಂರಕ್ಷಣೆ ಕುರಿತಂತೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳಿಗೆ ಗಿಡ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕಿನ ಸಿಎಸ್.ಸಿ ನೋಡಲ್ ಅಧಿಕಾರಿ ಸುರೇಶ ರವರು ಸಾಮಾನ್ಯ ಸೇವಾ ಕೇಂದ್ರ ದಲ್ಲಿ ಸಿಗುವ ಸೇವೆ ಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರು ಕೃಷ್ಣ, ಮುಖ್ಯ ಶಿಕ್ಷಕರ ಮಹಮ್ಮದ್ ರಿಯಾಜ್, ಕೊಕ್ರಾಡಿ ಮತ್ತು ಸಾವ್ಯ ಒಕ್ಕೂಟದ ಅಧ್ಯಕ್ಷರುಗಳಾದ ಶ್ರೀಮತಿ ವಾರಿಜ, ಯಮುನಾ, ವಿಪತ್ತು ಘಟಕ ಸಾಯೋಜಕಿ ಹರೀಣಾಕ್ಷಿ, ದಿನೇಶ್ ಶೆಟ್ಟಿ, ಸಂತೋಷ್ ಪೂಜಾರಿ, ಅಣ್ಣಿಎಮ್.ಕೆ ರಾಜು ಪೂಜಾರಿ, ಕರಿಯ ಪೂಜಾರಿ, ಹರೀಶ್ ಉಪಸ್ಥಿತರಿದ್ದರು.

ಶಿಕ್ಷಕಿ ಅಕ್ಕಮ್ಮ ಕಾರ್ಯಕ್ರಮ ನಿರೂಪಿಸಿ, ಶಾಲಾ ಅಧ್ಯಾಪಕಿ ಲವೀನಾ ವೀಣಾ ಡಯಾಸ್ ಸ್ವಾಗತಿಸಿ, ಸಹ ಶಿಕ್ಷಕಿ ವಿದ್ಯಾ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರು ಎಸ್.ಡಿ.ಎಮ್.ಸಿ ಸದಸ್ಯರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya
error: Content is protected !!