September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

ಗುರುವಾಯನಕೆರೆ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI)ಸ್ಥಾಪನೆಯ 76 ನೇ ವಾರ್ಷಿಕೋತ್ಸವದ ಅಂಗವಾಗಿ ಜು. 01 ರಂದು ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ’ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ಸ್ ಆಗಿರುವ ಸಿಎ ಸುಕನ್ಯಾ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ನೈತಿಕತೆ, ನಿಷ್ಠೆ ಮತ್ತು ರಾಷ್ಟ್ರೀಯ ಆರ್ಥಿಕತೆಯ ಬೆಳವಣಿಗೆಯಲ್ಲಿ ಅವರ ಪಾತ್ರದ ಕುರಿತು ತಿಳಿಸಿ, ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಚಾರ್ಟರ್ಡ್ ಅಕೌಂಟೆಂಟ್ಸ್ ವೃತ್ತಿಯ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಅದರ ಪಾತ್ರದ ಬಗ್ಗೆ ತಿಳಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಹರೀಶ್ ಅವರು “ಸಿಎ ದಿನಾಚರಣೆ ಎಂದರೆ ಕೇವಲ ಉತ್ಸವವಲ್ಲ; ಅದು ಪ್ರಾಮಾಣಿಕತೆ, ಶ್ರಮ ಮತ್ತು ಸಮಾಜದ ನಂಬಿಕೆಯನ್ನು ಪ್ರತಿಬಿಂಬಿಸುವ ದಿನ” ಎಂದು ಹೇಳಿದರು.

ಸಮಾರಂಭದಲ್ಲಿ ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಗಂಗಾಧರ. ಇ. ಮಂಡಗಳಲೆ, ಕಾಲೇಜಿನ ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಕಾಲೇಜಿನ ‘ಸಿಎ’ಫೌಂಡೇಶನ್ ಸಂಯೋಜಕಿ ಡಾ. ಮಹಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕುಮಾರಿ ಸ್ಪರ್ಧಾ ಮತ್ತು ಕುಮಾರಿ ನೇಹಾ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡು, ಉಪನ್ಯಾಸಕಿ ಶ್ರೀಮತಿ ದಿವ್ಯಶ್ರೀ.ಜಿ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಅನುಷಾ.ಎ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya
error: Content is protected !!