September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆಯನ್ನು ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿ ಅಧ್ಯಕ್ಷ ವಕೀಲರಾದ ಉದಯ್ ಬಿ.ಕೆ ಅವರು ವಹಿಸಿದ್ದರು.

ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡಿ ಜಿಲ್ಲಾಡಳಿತ ಮತ್ತು ನೂತನವಾಗಿ ಬಂದಿರುವಂತಹ ಪೊಲೀಸ್ ವರಿಷ್ಠಾಧಿಕಾರಿಗಳು ತೆಗೆದುಕೊಳ್ಳುತ್ತಿರುವ ತೀರ್ಮಾನಗಳಿಂದ ಕೆಂಪು ಕಲ್ಲು ಮರಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಇದರಿಂದಾಗಿ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ದೃಷ್ಟಿಯಲ್ಲಿ ಈ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ತಹಶೀಲ್ದಾರರು ಪೊಲೀಸ್ ನಿರೀಕ್ಷಕರಿಗೆ ಮನವಿ ಮಾಡುವುದು. ಈ ಮನವಿಗೆ ಒಂದು ವಾರದ ಒಳಗೆ ಸ್ಪಂದಿಸದಿದ್ದರೆ ಬೃಹತ್ ಜನೊಂದೋಲನ ಸಭೆಯನ್ನು ನಡೆಸುವುದು ಎಂದು ಹೇಳಿದರು.

ಬಿಎಮ್ ಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಅವರು ಮಾತನಾಡಿ ಕಾರ್ಮಿಕರ ಪರವಾಗಿ ಸದಾ ನಾವು ಧ್ವನಿ ಎತ್ತಲಿದ್ದೇವೆ ಇದೀಗ ಕಾರ್ಮಿಕರಿಗೆ ಕಟ್ಟಡ ನಿರ್ಮಾಣದ ಸಾಮಗ್ರಿಗಳು ದೊರಕದೆ ಕಾರ್ಮಿಕರು ಕೆಲಸ ಇಲ್ಲದೆ ಬಳಲುವಂತಾಗಿದೆ ಈ ಸಮಸ್ಯೆಯನ್ನು ಶೀಘ್ರವಾಗಿ ಜಿಲ್ಲಾಡಳಿತವನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಶೆಟ್ಟಿ ಮತ್ತು ಪ್ರಮುಖರಾದ ಉದಯ್ ಕುಮಾರ್ ಉಜಿರೆ ಗಣೇಶ್ ಪೂಜಾರಿ ಪೆರಾಡಿ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು. ಕುಮಾರ್ ‌ನಾಧ್ ಸ್ವಾಗತಿಸಿ ಗಣೇಶ್ ಪೂಜಾರಿ ವಂದಿಸಿದರು.

Related posts

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಂದ ಪಾದಚಾರಿಗಳಿಗೆ ಪಾನೀಯ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya
error: Content is protected !!