23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ಶಿಕ್ಷಕರು ಅಂಧಕಾರದಿಂದ ಜ್ಞಾನದೆಡೆಗೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತಾರೆ.ಆದರೆ ಬದಲಾದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನ ಮತ್ತು ಅದರ ಬಳಕೆಯ ಕುರಿತು ತಿಳಿದುಕೊಳ್ಳುವುದು ಉತ್ತಮ. ಪ್ರತಿಯೊಬ್ಬನಲ್ಲೂ ಸುಪ್ತವಾಗಿರುವ ಜ್ಞಾನವನ್ನು ಬಳಸಿಕೊಂಡು ಸಾರ್ವಕಾಲಿಕ ಸತ್ಯಗಳಾದ ದಯೆ, ಕರುಣೆ, ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ನೋಡಿಕೊಳ್ಳವಂತಾಗಬೇಕು ಎಂದು ಉಜಿರೆ ಎಸ್ ಡಿ ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೇಶವ.ಟಿ.ಎನ್ ಹೇಳಿದರು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ| ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಸೂರಜ್ ಚಾರ್ಲ್ಸ್ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕಿ ರೆನಿಶಾ ವೇಗಸ್ ಸ್ವಾಗತಿಸಿ, ಉಪನಿರ್ದೇಶಕಿ ಅನು ವಂದಿಸಿ, ವಿದ್ಯಾರ್ಥಿ ನಾಯಕ ಶಾಶ್ವತ್ ಪ್ರೀತಂ ಅನಿಸಿಕೆ ಹಂಚಿಕೊಂಡರು. ವಿದ್ಯಾರ್ಥಿಗಳಾದ ಅವಿನ್ ಹಾಗೂ ಜೊತ್ಸ್ನ್ ಜೋಸ್ ಕಾರ್ಯಕ್ರಮ ನಿರೂಪಿಸಿದರು,.

Related posts

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya
error: Content is protected !!