September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮವು ಜೂ. 30ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ವಿಭಾಗದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಿಂಗಪ್ಪ ಮಾತನಾಡಿ ; ಇತ್ತೀಚಿನ ದಿನಗಳಲ್ಲಿ ಯುವಕರು ಸಂಚಾರಿ ನಿಯಮಗಳನ್ನು ಪಾಲಿಸದೆ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಕಾನೂನು ನಿಯಮಗಳನ್ನು ಪಾಲಿಸುವುದರ ಜೊತೆಗೆ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು. ಅದಲ್ಲದೆ ಪೋಕ್ಸೊ ಕಾಯಿದೆ, ಟ್ರಾಫಿಕ್ ಸಿಗ್ನಲ್, ಅಪರಾಧ ತಡೆ, ಸೈಬರ್ ವಂಚನೆಯ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಾಹನಗಳನ್ನು ಚಲಾಯಿಸಲು ಪ್ರಾರಂಭಿಸುವ ಮುನ್ನ ಸಂಚಾರಿ ನಿಯಮಗಳನ್ನು ಕಲಿಯಲು ಸೂಚಿಸಿದರು. ಬೆಳ್ತಂಗಡಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ನ ಸಹಾಯಕ ಸಬ್ ಇನ್ಸ್ಪೆಕ್ಟರ್ ಚಿನ್ನಪ್ಪ, ಹೆಡ್ ಕಾನ್ಸ್ಟೇಬಲ್ ಸದಾಶಿವ ಉಪಸ್ಥಿತರಿದ್ದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಅಶ್ವಿನ್ ಮರಾಠೆ ನಿರೂಪಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಜೈನ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ತೃಪ್ತಿ ಶೆಟ್ಟಿ ಕಾರ್ಯಕ್ರಮವನ್ನು ಆಯೋಜಿಸಿದ್ದರು

Related posts

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!