23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ 2025 -26 ನೇ ಸಾಲಿನ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು.


ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀಧ. ಮo ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಜಯಶ್ರೀ ಜೈನ್ ಭಾಗವಹಿಸಿ ವಿದ್ಯಾರ್ಥಿ ಸರಕಾರದಲ್ಲಿ ನಾಯಕನಾಗಿ ಚುನಾಯಿತನಾದ ವಿದ್ಯಾರ್ಥಿಯು ಶಾಲೆಯಲ್ಲಿ ಹಲವಾರು ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಮುಂದೊಂದು ದಿನ ದೇಶದ ಉತ್ತಮ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿದೆ. ಉತ್ತಮ ರೀತಿಯಲ್ಲಿ ಶಾಲೆಯನ್ನು ಮುನ್ನಡೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು.


ಶಾಲಾ ಮುಖ್ಯೋಪಾಧ್ಯಾರಾದ ಕಮಲ್ ತೇಜು ರಜಪೂತ್ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣವಚನವನ್ನು ಬೋಧಿಸಿದರು.
ಶಿಕ್ಷಕಿ ಸೀಮಾ ಎಸ್ ಎಂ ಮಂತ್ರಿಗಳ ಜವಾಬ್ದಾರಿಯನ್ನು ತಿಳಿಸಿದರು.


ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಶಿಕ್ಷಕ ಶೇಖರ್ ಸ್ವಾಗತಿಸಿ ಶಿಕ್ಷಕಿ ಪೂರ್ಣಿಮ ವಂದಿಸಿದರು. ಶ್ರೀಜಾ ಕಾರ್ಯಕ್ರಮ ನಿರ್ವಹಿಸಿದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!