25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಬೆಳ್ತಂಗಡಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆದಲ್ಲಿ ಕಾರಿನಲ್ಲಿಯೇ ಮಹಿಳೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜು.1ರಂದು ನಡೆದಿದೆ.

ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಎಂಬುವರು ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಕಾರಿನಲ್ಲಿಯೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ದಾರಿ ಮಧ್ಯೆಯೇ ಕಾರಿನಲ್ಲೇ ಮಹಿಳೆಗೆ ಹೆರಿಗೆಯಾದ ಘಟನೆ ವೈದ್ಯರದಿನದಂದು ನಡೆದಿದೆ. ತಾಯಿ ಮಗು ಇಬ್ಬರೂ ಸುರಕ್ಷಿತರಾಗಿದ್ದು ಬೆಳ್ತಂಗಡಿ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಆರೈಕೆಯಲ್ಲಿದ್ದಾರೆ.

ಸುನ್ನತ್‌ಕೆರೆ ನಿವಾಸಿ ಇಕ್ಬಾಲ್ ಅವರ ಪತ್ನಿ ತುಂಬು ಗರ್ಬಿಣಿ ಸಫಿಯಾ ಅಳದಂಗಡಿ ಅವರು ತೀವ್ರವಾದ ಹೆರಿಗೆ ನೋವಿನೊಂದಿಗೆ ರಸ್ತೆ ಬದಿನಿಂತುಕೊAಡಿದ್ದರು. ಇದನ್ನು ಗಮನಿಸಿದ ಜಮಾಲ್ ಅವರು ತನ್ನ ಕಾರನ್ನು ತಿರುಗಿಸಿ ಬಂದು ವಿಚಾರಿಸಿದರು. ದಂಪತಿಯ ಸಂಕಷ್ಟ ಅರಿತ ಅವರು ತಕ್ಷಣ ಮಹಿಳೆಯನ್ನು ತನ್ನ ಕಾರಿನಲ್ಲಿ ಕುಳ್ಳಿರಿಸಿ ಆಸ್ಪತ್ರೆಯತ್ತ ಪ್ರಯಾಣ ಬೆಳೆಸಿದರು. ಆದರೆ ಅದಾಗಲೇ ಸಫಿಯಾ ಅವರು ಕಾರಿನಲ್ಲೇ ಪ್ರಸವಿಸಿದ್ದಾರೆ. ಪ್ರಸವದ ವೇಳೆ ಪತಿ ಇಕ್ಬಾಲ್ ಮತ್ತು ಜಮಾಲ್ ಅವರು ಮಹಿಳೆಗೆ ತುರ್ತು ಸ್ಪಂದಿಸಿದ್ದು ಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರ ದಿನದಂದು ಸಫಿಯಾ ಪಾಲಿಗೆ ಪತಿ ಮತ್ತು ಜಮಾಲ್ ವೈದ್ಯರಂತೆ ಕಂಡಿರುವುದು ಸತ್ಯ. ಜಮಾಲ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಧ್ವಜಸ್ತಂಭ ಸ್ಥಾಪನೆಗೆ ಸಿದ್ದಗೊಳಿಸಿದ ಕಲ್ಲಿನ ಕೆತ್ತನೆ ಕಾರ್ಯಕ್ಕೆ ಚಾಲನೆ

Suddi Udaya
error: Content is protected !!