ಗ್ರಾಮಾಂತರ ಸುದ್ದಿ

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

ನೆರಿಯ :ಉದಯ ಮಹಾಸಂಘ ಗಂಡಿಬಾಗಿಲು ಇದರ ಮಹಾಸಭೆ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜು 01ರಂದು ಸಂತ ಥೋಮಸ್ ಚರ್ಚ್ ಸಭಾಂಗಣ ಗಂಡಿಬಾಗಿಲು ಇಲ್ಲಿ ಆಯೋಜಿಸಲಾಗಿತ್ತು

. ಉದಯ ಮಹಾಸಂಘದ ಉಪಾಧ್ಯಕ್ಷರಾದ ಶ್ರೀಮತಿ ಮೇರಿ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿಗಳಾಗಿ ವಂ.ಫಾ. ಜೋಸ್ ಆಯಾಂಕುಡಿ, ಸ್ಥಳೀಯ ಧರ್ಮಗುರುಗಳು ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲು ಇವರು ಪರಿಸರವನ್ನು ಉಳಿಸಿಕೊಳ್ಳಲು ತೆಗೆದು ಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ಬಿನೋಯಿ ಎ.ಜೆ ಇವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸ್ನೇಹಜ್ಯೋತಿ ತಾಲೂಕು ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಜೋನ್, ಸ್ನೇಹ ಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಎಲಿಯಮ್ಮ ತೋಮಸ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮರಿಯಮ್ಮ ವೇದಿಕೆಯಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ನಂತರ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಶ್ರೀಮತಿ ಉಷಾ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಮಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ: ಯು.ಎಸ್. ಆಟೋ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!